alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಯ ಬಾತ್ ರೂಂನಲ್ಲೇ ದುಡುಕಿದ ಮಹಿಳೆ

ವಿಜಯಪುರ: ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಲು ಯುವಕನಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ, ಹಲ್ಲೆಗೆ ಒಳಗಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯಪುರ ಆಸ್ಪತ್ರೆಯ ವಾರ್ಡ್ ನ ಬಾತ್ ರೂಂನಲ್ಲಿ ಮಹಿಳೆ ದುಪ್ಪಟದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಾತಿ ಹೊಸಮನಿ(28) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ.

ಹೊನಗೇನಹಳ್ಳಿಯಲ್ಲಿ 24 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಯುವಕನಿಗೆ ಸಹಾಯ ಮಾಡಿದ ಆರೋಪದ ಮೇಲೆ ಸ್ವಾತಿ ಅವರ ಮೇಲೆಯೂ ಹಲ್ಲೆ ಮಾಡಲಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಸಂಬಂಧ ದೂರು, ಪ್ರತಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಇದೇ ವೇಳೆ ಆಸ್ಪತ್ರೆಯಲ್ಲಿದ್ದ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...