alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ ಬಿ.ಎಸ್.ವೈ. ಪುತ್ರ

ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, 1001 ಮೆಟ್ಟಿಲು ಹತ್ತಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯ ಮತ್ತು ದೇಶಕ್ಕೆ ಒಳ್ಳೆಯದಾಗಲಿ ಎಂದು ಬೆಟ್ಟ ಹತ್ತುತ್ತಿದ್ದೇನೆ. ಇದರಲ್ಲಿ ವೈಯಕ್ತಿಕ ರಾಜಕೀಯ ಇಲ್ಲ. ಪ್ರಧಾನಿ ನರೇಂದ್ರ ಮೋದಿ‌ ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ ಎಂಬುದು ನನ್ನ ಆಶಯ ಎಂದರು. ಈ ವೇಳೆ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ವಿಜಯೇಂದ್ರಗೆ ಸಾಥ್ ನೀಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...