alex Certify
ಕನ್ನಡ ದುನಿಯಾ       Mobile App
       

Kannada Duniya

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೆ ಎದುರಾಯ್ತು ವಿಘ್ನ

vis

ಮೈಸೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮೈಸೂರಿಗೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದ್ದು, ಮತ್ತೆ ವಿಘ್ನ ಎದುರಾಗಿದೆ.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಮೊದಲಿಗೆ ಸ್ಮಾರಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತಾದರೂ, ಅಲ್ಲಿ ಅಡೆ ತಡೆ ಎದುರಾಗಿದ್ದರಿಂದ ಮೈಸೂರಿಗೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ 5 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ಗುರುತಿಸಿದ್ದು, ಇಲ್ಲಿ ಸ್ಮಾರಕ ನಿರ್ಮಾಣಕ್ಕೆ ಡಿಸೆಂಬರ್ 6 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಸ್ಥಳ ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಸಾಗುವಳಿದಾರರು ಸ್ಮಾರಕ ನಿರ್ಮಿಸಬಾರದೆಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ನಮಗೆ ಹಕ್ಕುಪತ್ರ ನೀಡಬೇಕೆಂದು ಹಿಂದೆಯೇ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈಗ ಜೀವನೋಪಾಯಕ್ಕಾಗಿ ಇರುವ ಜಮೀನನ್ನೇ ಕಸಿದುಕೊಳ್ಳುತ್ತಿರುವುದು ಸರಿಯಲ್ಲ ಎಂದು ರೈತರು ವಿಷ ಸೇವಿಸಲು ಮುಂದಾಗಿದ್ದು, ರೈತ ಮಹಿಳೆಯರು ಕಣ್ಣೀರಿಟ್ಟಿದ್ದಾರೆ.

ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಬಳಿಕ ಸ್ಮಾರಕ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದ್ದಾರೆ. ಆದರೆ, ಜಿಲ್ಲಾಡಳಿತ ಇದು ಸರ್ಕಾರಿ ಜಾಗವಾಗಿದ್ದು, ಇದೇ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...