alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರಿಗೆ ಕಡಿವಾಣ ಹಾಕಲು ವಿಶ್ವನಾಥ್ ಅವರಿಗೆ ನೀಡಲಾಯ್ತಾ ಜೆಡಿಎಸ್ ಅಧ್ಯಕ್ಷ ಸ್ಥಾನ…?

ನಿರೀಕ್ಷೆಯಂತೆಯೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್. ವಿಶ್ವನಾಥ್ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನಲ್ಲಿದ್ದ ವಿಶ್ವನಾಥ್, ಸಿದ್ದರಾಮಯ್ಯನವರ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದು ಬಳಿಕ ಅವರನ್ನು ಜೆಡಿಎಸ್ ಗೆ ಕರೆತಂದು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿ ಶಾಸಕರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದ ಜೆಡಿಎಸ್ ನಾಯಕರು ಈಗ ಮತ್ತೊಂದು ಪ್ರಮುಖ ಜವಾಬ್ದಾರಿ ನೀಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ ಹಿಂದೆ ನಾನಾ ಲೆಕ್ಕಾಚಾರಗಳಿವೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ. ಪ್ರಮುಖವಾಗಿ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರಿಗೆ ಕಡಿವಾಣ ಹಾಕುವುದು ಈ ತಂತ್ರದ ಒಂದು ಭಾಗವಾಗಿದೆ ಎಂದು ಹೇಳಲಾಗುತ್ತಿದೆ.

ಮೈತ್ರಿಕೂಟ ಸರ್ಕಾರದ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಅಧಿಕಾರ ವಹಿಸಿಕೊಂಡ ಬಳಿಕ, ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳಲು ಮುಂದಾದರೂ ಅದಕ್ಕೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅಡ್ಡಗಾಲು ಹಾಕುತ್ತಿರುವುದು ಜೆಡಿಎಸ್ ನಾಯಕರಿಗೆ ಇರುಸುಮುರುಸು ತಂದಿದೆ. ಈ ಹಿನ್ನಲೆಯಲ್ಲಿ ಜೆಡಿಎಸ್ ಅಧ್ಯಕ್ಷರಾಗಿ ಈಗ ನೇಮಕಗೊಂಡಿರುವ ಸಿದ್ದರಾಮಯ್ಯನವರ ರಾಜಕೀಯ ಕಡುವೈರಿ ವಿಶ್ವನಾಥ್ ಅವರನ್ನು ಸಮನ್ವಯ ಸಮಿತಿ ಸದಸ್ಯರನ್ನಾಗಿಸುವ ಲೆಕ್ಕಾಚಾರ ಜೆಡಿಎಸ್ ನಾಯಕರದ್ದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...