alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ಸೆಲ್ ನಲ್ಲಿ ಶಶಿಕಲಾ-ಇಳವರಸಿ

sasikala-in-convoyಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದಾರೆ. ಇದೇ ಪ್ರಕರಣದಲ್ಲಿ ಮತ್ತೊಬ್ಬ ಅಪರಾಧಿಯಾಗಿರುವ ಇಳವರಸಿ ಹಾಗೂ ಶಶಿಕಲಾರನ್ನು ಒಂದೇ ಸೆಲ್ ನಲ್ಲಿರಿಸಲಾಗಿದೆ.

ರಾತ್ರಿ 8-30 ರ ಸುಮಾರಿಗೆ ಊಟ ಮಾಡಿರುವ ಶಶಿಕಲಾ, ನಂತರ ರಾತ್ರಿ 11-45 ರವರೆಗೆ ಇಳವರಸಿ ಜೊತೆ ಮಾತುಕತೆ ನಡೆಸಿದರೆಂದು ಹೇಳಲಾಗಿದೆ. ಅಲ್ಲದೆ ಭದ್ರತೆಗಾಗಿ ನಿಯೋಜನೆಗೊಂಡಿರುವ ಮಹಿಳಾ ಸಿಬ್ಬಂದಿಯ ಜೊತೆಗೆ ಮಾತನಾಡಿದ ಶಶಿಕಲಾ ಬಳಿಕ ನಿದ್ರೆಗೆ ಜಾರಿದ್ದಾರೆ.

ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಶರಣಾಗುವ ಮುನ್ನ ಬುಧವಾರದಂದು ಚೆನ್ನೈನ ಮರೀನಾ ಬೀಚ್ ನಲ್ಲಿರುವ ಜಯಲಲಿತಾರ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದ ಶಶಿಕಲಾ, ಶಿಕ್ಷಾವಧಿ ಪೂರ್ಣಗೊಂಡ ಬಳಿಕ ಮತ್ತೆ ಮರಳಿ ಅಧಿಕಾರಕ್ಕೇರುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದರು. ಅಲ್ಲದೇ ಮುಖ್ಯಮಂತ್ರಿ ಗಾದಿಗೇರುವ ತಮ್ಮ ಕನಸಿಗೆ ಅಂತಿಮ ಗಳಿಗೆಯಲ್ಲಿ ತಣ್ಣೀರೆರೆಚಿದ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಕುರಿತು ಶಾಸಕರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...