alex Certify
ಕನ್ನಡ ದುನಿಯಾ       Mobile App
       

Kannada Duniya

ಗೋಡೆ ಕುಸಿದು ಅಜ್ಜಿ, ಮೊಮ್ಮಗ ಸಾವು

kal-aji-momag

ಕಲಬುರಗಿ: ಗೋಡೆ ಕುಸಿದು ಅಜ್ಜಿ, ಮೊಮ್ಮಗ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಪಾಣೆಗಾಂವ್ ನಲ್ಲಿ ನಡೆದಿದೆ.

60 ವರ್ಷದ ಸಂಗಮ್ಮ, 3 ವರ್ಷದ ಮಗು ಮೃತಪಟ್ಟವರು. ಮನೆಯ ಮುಂಭಾಗದಲ್ಲಿ ಸಂಗಮ್ಮ ಕುಳಿತಿದ್ದು, ಅವರ ಬಳಿಯಲ್ಲೇ ಮಗು ಆಟವಾಡುತ್ತಿತ್ತು. ಈ ಸಂದರ್ಭದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಎದುರು ಮನೆಯ ಗೋಡೆ ಕುಸಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಫರಹತಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಜ್ಜಿ, ಮೊಮ್ಮಗನ ಸಾವಿನಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...