alex Certify
ಕನ್ನಡ ದುನಿಯಾ       Mobile App
       

Kannada Duniya

ದಂಪತಿ ಮಲಗಿದ್ದಾಗಲೇ ಬಂದೆರಗಿತ್ತು ಸಾವು

ವಿಜಯಪುರ: ಭಾರಿ ಮಳೆಗೆ ಗೋಡೆ ಕುಸಿದು ದಂಪತಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಹಳಗಣಕಿ ಗ್ರಾಮದಲ್ಲಿ ನಡೆದಿದೆ.

ರಾಚಪ್ಪ(65), ಸಿದ್ದವ್ವ(60) ದಂಪತಿ ಮೃತಪಟ್ಟವರು. ಮನೆಯಲ್ಲಿದ್ದ ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ಸಂಜೆಯಿಂದ ಈ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗಿದ್ದು, ನೆನೆದಿದ್ದ ಮನೆಯ ಗೋಡೆ ಬೆಳಗಿನ ಜಾವ ಏಕಾಏಕಿ ಕುಸಿದು ಬಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ, ಈ ವೇಳೆಗಾಗಲೇ ದಂಪತಿ ಮೃತಪಟ್ಟಿದ್ದರು. ಸ್ಥಳಕ್ಕೆ ಹೊರ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...