alex Certify
ಕನ್ನಡ ದುನಿಯಾ       Mobile App
       

Kannada Duniya

ಭಾವುಕರಾಗಿ ಕಣ್ಣೀರಿಟ್ಟ ಸ್ಪೀಕರ್ ರಮೇಶ್ ಕುಮಾರ್

ಕೋರಮಂಗಲ-ಚಲ್ಲಘಟ್ಟ ನೀರಾವರಿ ಯೋಜನೆ ಪೂರ್ಣಗೊಂಡು ಕೋಲಾರ ತಾಲೂಕಿನ ಲಕ್ಷ್ಮಿಸಾಗರ ಕೆರೆಗೆ ನೀರು ಬಂದಿದ್ದನ್ನು ಕಂಡು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ರಮೇಶ್ ಕುಮಾರ್ ಅವರ ಕನಸಿನ ಯೋಜನೆ ಇದಾಗಿದ್ದು, 1280 ಕೋಟಿ ರೂ. ವೆಚ್ಚದಲ್ಲಿ ಆರಂಭಗೊಂಡಿದ್ದ ಯೋಜನೆ ಈಗ ಪೂರ್ಣಗೊಂಡಿದೆ. ಶನಿವಾರ ಲಕ್ಷ್ಮಿ ಸಾಗರ ಕೆರೆಗೆ ನೀರು ಬಂದಿದ್ದು, ಇದನ್ನು ಕಂಡು ಭಾವುಕರಾದ ರಮೇಶ್ ಕುಮಾರ್, ಜಿಲ್ಲೆಗೆ ನೀರು ಹರಿಸಲು ಸಾಧ್ಯವಾಗಿದ್ದು ನನ್ನ ಪೂರ್ವಜನ್ಮದ ಪುಣ್ಯ ಎಂದಿದ್ದಾರೆ.

ಬೆಂಗಳೂರು ನಗರದ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಗೆ ಹರಿಸುವ ಯೋಜನೆ 2016 ರ ಜೂನ್ ನಲ್ಲಿ ಆರಂಭವಾಗಿತ್ತು. ವಿಧಾನಸಭಾ ಚುನಾವಣೆಗೂ ಮುನ್ನವೇ ಇದನ್ನು ಪೂರ್ಣಗೊಳಿಸಲು ಅಂದು ಸಚಿವರಾಗಿದ್ದ ರಮೇಶ್ ಕುಮಾರ್ ಸಾಕಷ್ಟು ಪ್ರಯತ್ನಪಟ್ಟರೂ ಹಲವು ಕಾರಣಗಳಿಂದಾಗಿ ವಿಳಂಬವಾಗಿದ್ದು, ಇದೀಗ ಪೂರ್ಣಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...