alex Certify
ಕನ್ನಡ ದುನಿಯಾ       Mobile App
       

Kannada Duniya

ಕಿರುಕುಳ ತಾಳದೆ ಬಾವಿಗೆ ಹಾರಿದರು

well

ಸೇವಾಮನೋಭಾವ ತೋರುವ ಶಾಲೆಯಲ್ಲೇ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ. ಶಾಲೆಯಲ್ಲಿನ ಕಿರುಕುಳ ತಾಳಲಾರದೇ ಐವರು ಅಂಧ ವಿದ್ಯಾರ್ಥಿಗಳು ಬಾವಿಗೆ ಹಾರಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಇದಕ್ಕೆ ಶಾಲೆಯ ಆಡಳಿತ ಮಂಡಳಿ ಕಿರುಕುಳವೇ ಕಾರಣ ಎನ್ನಲಾಗಿದೆ.

ವಿಜಯಪುರದ ಮಲ್ಲಿಕಾರ್ಜುನ ನಗರದಲ್ಲಿರುವ ಶಿವಶರಣರ ಹರಳಯ್ಯ ಅಂಧರ ವಸತಿ ಶಾಲೆಯಲ್ಲಿ ಕಲಿಯುತ್ತಿದ್ದ ಐವರು, ಶಾಲೆಯ ಅಧ್ಯಕ್ಷ ಮತ್ತು ಇತರೆ ಕೆಲವು ಸಿಬ್ಬಂದಿ ನೀಡಿದ ಕಿರುಕುಳದಿಂದ ಬೇಸತ್ತಿದ್ದು, ಸಮೀಪದಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸುದ್ದಿ ತಿಳಿದ ಅಕ್ಕಪಕ್ಕದವರು ಕೂಡಲೇ ಬಾವಿಗೆ ಇಳಿದು ಐದೂ ಮಂದಿಯನ್ನು ರಕ್ಷಿಸಿದ್ದಾರೆ. ಘಟನೆಗೆ ಕಾರಣರಾದ ಶಾಲೆಯ ಅಧ್ಯಕ್ಷ ಮತ್ತು ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ವಿಜಯಪುರ ಎಪಿಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಾವಿಗೆ ಬಿದ್ದಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ಪಡೆದು ಸಾರ್ವಜನಿಕರು ಹಾಗೂ ಶಾಲೆಯ ಆಡಳಿತ ಮಂಡಳಿಯವರ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...