alex Certify
ಕನ್ನಡ ದುನಿಯಾ       Mobile App
       

Kannada Duniya

ಇದಕ್ಕೂ ಬಳಸುತ್ತಿದ್ದಾರೆ ವಾಟ್ಸಾಪ್

whatsappಬೆಂಗಳೂರು: ಆಧುನಿಕತೆ ಹೆಚ್ಚಿದಂತೆಲ್ಲಾ ತಂತ್ರಜ್ಞಾನ ಬಳಕೆಯೂ ಹೆಚ್ಚಾಗಿದೆ. ಅಲ್ಲದೇ, ಇತ್ತೀಚೆಗೆ ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಿದ್ದು, ಇದರೊಂದಿಗೆ ಸಾಮಾಜಿಕ ಜಾಲತಾಣ ಬಳಸುವವರೂ ಜಾಸ್ತಿಯಾಗಿದ್ದಾರೆ.

ಆನ್ ಲೈನ್, ಜಾಲತಾಣಗಳಿಂದ ಉಪಯೋಗವಾದಂತೆ, ದುರುಪಯೋಗವೂ ಆಗುತ್ತಿದೆ. ಕೆಲವರು ಇವನ್ನು ದುರ್ಬಳಕೆ ಮಾಡಿಕೊಂಡು ಅಪರಾಧ ಎಸಗುತ್ತಾರೆ. ಅದಕ್ಕಾಗಿಯೇ ಪೊಲೀಸ್ ಇಲಾಖೆ ಪ್ರತ್ಯೇಕ ವಿಭಾಗವನ್ನು ಆರಂಭಿಸಿದೆ. ಇದೆಲ್ಲಾ ಇರಲಿ. ಬೆಂಗಳೂರು ಪೊಲೀಸ್ ಇಲಾಖೆ ತಂತ್ರಜ್ಞಾನವನ್ನು ಸದ್ಭಳಕೆ ಮಾಡಿಕೊಂಡು ಹಲವಾರು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹತ್ತಿರವಾಗಿದೆ.

ಫೇಸ್ ಬುಕ್, ಟ್ವಿಟರ್ ನಲ್ಲಿರುವ ಬೆಂಗಳೂರು ಪೊಲೀಸ್ ಇಲಾಖೆ ಇದೀಗ, ವಾಟ್ಸಾಪ್ ಮೂಲಕವೂ ದೂರು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರು ತಮ್ಮ ಕಣ್ಣೆದುರಿಗೆ ನಡೆಯುವ ಅಪರಾಧಗಳ ಬಗ್ಗೆ ವಾಟ್ಸಾಪ್ ಮೂಲಕವೂ ಮಾಹಿತಿ ನೀಡಬಹುದಾಗಿದೆ.

ಬೆಂಗಳೂರಿನ 10 ಡಿವಿಜನ್ ಗಳಲ್ಲಿಯೂ ಪ್ರತ್ಯೇಕ ಫೋನ್ ನಂಬರ್ ನೀಡಿದ್ದು, ವಾಟ್ಸಾಪ್ ನಲ್ಲಿಯೂ ಸಾರ್ವಜನಿಕರು ದೂರು ಸಲ್ಲಿಸುವ ವ್ಯವಸ್ಥೆ ಮಾಡಲಾಗಿದೆ. ಇದೊಂದು ಉತ್ತಮ ಕ್ರಮ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...