alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿಕೂಟದ ಸರ್ಕಾರದಲ್ಲಿ ಯಾರಾಗಲಿದ್ದಾರೆ ಸೂಪರ್ ಸಿಎಂ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅಂತಿಮವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಮುಖ ಖಾತೆಗಳಿಗಾಗಿ ಉಭಯ ಪಕ್ಷಗಳ ನಡುವೆ ಹಗ್ಗ ಜಗ್ಗಾಟ ನಡೆದಿತ್ತು.

ಇದೀಗ ಮಾತುಕತೆ ಮೂಲಕ ಈ ವಿವಾದವನ್ನು ಬಗೆಹರಿಸಿಕೊಳ್ಳಲಾಗಿದ್ದು, ಬುಧವಾರದಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಲವು ದಿನಗಳಿಂದ ಖಾತೆ ಕುರಿತು ನಡೆಯುತ್ತಿದ್ದ ಹಗ್ಗಜಗ್ಗಾಟ, ಅಂತಿಮವಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ ಬಗೆಹರಿದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ದೇವೇಗೌಡರ ಮನೆಗೆ ತೆರಳಿ ಮಾತುಕತೆ ಮೂಲಕ ಬಿಕ್ಕಟ್ಟನ್ನು ಪರಿಹರಿಸಿಕೊಂಡಿದ್ದಾರೆ.

ಈ ಮಧ್ಯೆ ಸರ್ಕಾರವನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ಉಭಯ ಪಕ್ಷಗಳ ನಾಯಕರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ತಿಳಿದು ಬಂದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಆಗುಹೋಗುಗಳ ಕುರಿತು ಸೂಪರ್ ಸಿಎಂ ಆಗಿ ದೇವೇಗೌಡ ಕಾರ್ಯನಿರ್ವಹಿಸಲಿದ್ದಾರಾ ಅಥವಾ ಸಿದ್ದರಾಮಯ್ಯ ಇದನ್ನು ನಿರ್ವಹಿಸಲಿದ್ದಾರಾ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...