alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಮಿಲಿಯನ್ ಡಾಲರ್ ಪ್ರಶ್ನೆಗೆ ಇಲ್ಲಿದೆ ಉತ್ತರ

ಯಾವುದೇ ಪಕ್ಷಕ್ಕೆ ಬಹುಮತವಿಲ್ಲದ ಕಾರಣ ಅಧಿಕಾರದ ಗದ್ದುಗೆಗೇರಲು ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿದ್ದರೆ, ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿ ಕೂಡಾ ಸರ್ಕಾರ ರಚನೆಗೆ ತಮಗೆ ಆಹ್ವಾನ ನೀಡುವಂತೆ ರಾಜ್ಯಪಾಲ ವಜೂಭಾಯಿ ವಾಲಾರಲ್ಲಿ ಮನವಿ ಮಾಡಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ.ಎಸ್. ಯಡಿಯೂರಪ್ಪ ಸರ್ಕಾರ ರಚನೆಗೆ ತಮಗೆ ಆಹ್ವಾನ ನೀಡುವಂತೆ ಮನವಿ ಸಲ್ಲಿಸಿದ್ದರೆ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರೂ ಸಹ ಕಾಂಗ್ರೆಸ್ ಬೆಂಬಲ ನೀಡಿರುವುದರಿಂದ ಸರ್ಕಾರ ರಚನೆಗೆ ಅಗತ್ಯವಾದ ಬಹುಮತವಿರುವ ಕಾರಣ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.

ಈ ಮಧ್ಯೆ ಕರ್ನಾಟಕದಲ್ಲಿ ಪ್ರಸಕ್ತ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ರಾಜ್ಯಪಾಲರು, ದೇಶದ ಖ್ಯಾತನಾಮ ಕಾನೂನು ಪಂಡಿತರ ಮೊರೆ ಹೋಗಿದ್ದು, ಅವರುಗಳ ಸಲಹೆಯಂತೆ ದೊಡ್ಡ ಪಕ್ಷವಾಗಿರುವ ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಲಿದ್ದಾರೆಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಎಲ್ಲ ಸಿದ್ದತೆ ಮಾಡಿಕೊಂಡಿದ್ದು, ನಾಳೆ ಯಡಿಯೂರಪ್ಪನವರೊಬ್ಬರೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆಂದು ಹೇಳಲಾಗುತ್ತಿದೆ.

ಅಧಿಕಾರ ಸ್ವೀಕರಿಸಿದ ಬಳಿಕ ಬಹುಮತ ಸಾಬೀತಿಗೆ ಕಾಲಾವಕಾಶ ಸಿಗುವ ಕಾರಣ ಈ ಕಾಲಾವಧಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಕೆಲ ಶಾಸಕರ ಮನವೊಲಿಸಿ ಬಹುಮತ ಸಾಬೀತುಪಡಿಸುವ ದಿನದಂದು ಗೈರುಹಾಜರಿ ಮಾಡುವ ಮೂಲಕ ಬಹುಮತ ಸಾಬೀತುಪಡಿಸುವ ಇರಾದೆ ಬಿಜೆಪಿ ನಾಯಕರದ್ದಾಗಿದೆ. ಒಮ್ಮೆ ಬಹುಮತ ಸಾಬೀತುಪಡಿಸಿದರೆ 6 ತಿಂಗಳ ಕಾಲಾವಕಾಶ ಸಿಗುವುದರಿಂದ ಅಷ್ಟರೊಳಗೆ ವಿಪಕ್ಷಗಳ ಶಾಸಕರ ಬೆಂಬಲ ಗಿಟ್ಟಿಸಿಕೊಳ್ಳಬಹುದೆಂಬ ಲೆಕ್ಕಾಚಾರ ಬಿಜೆಪಿ ನಾಯಕರಲ್ಲಿದೆ.

ಬಿಜೆಪಿ ನಾಯಕರ ಈ ತಂತ್ರಗಾರಿಕೆಯನ್ನು ಮನಗಂಡಿರುವ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ರೆಸಾರ್ಟ್ ನತ್ತ ಮುಖ ಮಾಡಿದ್ದು, ಯಡಿಯೂರಪ್ಪ ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಬಹುಮತ ಸಾಬೀತುಪಡಿಸಲಿದ್ದಾರೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...