alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು…?

ರಾಜ್ಯ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದರೂ ಇದನ್ನು ನಿರ್ಧರಿಸಬೇಕಾದ ಮತದಾರರ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಮತದಾರರು ತಮ್ಮ ನಿರ್ಧಾರವನ್ನು ಬಹಿರಂಗಗೊಳಿಸದೆ ಮುಗುಮ್ಮಾಗಿ ಉಳಿದಿದ್ದು, ಮೇ 15 ರ ಮಂಗಳವಾರದಂದು ಹೊರ ಬೀಳಲಿರುವ ಫಲಿತಾಂಶದ ಬಳಿಕ ಮತದಾರರ ಅಂತಿಮ ತೀರ್ಪು ಹೊರ ಬೀಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಆಡಳಿತರೂಢ ಕಾಂಗ್ರೆಸ್, ಈ ಬಾರಿಯೂ ಜನತೆ ತಮ್ಮ ಪರವಾಗಿ ತೀರ್ಪು ನೀಡಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದರೆ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಚುನಾವಣೆಯಲ್ಲಿ ಬಿಜೆಪಿ, ಬಹುಮತ ಗಳಿಸುವುದು ಖಚಿತ ಎಂಬ ವಿಶ್ವಾಸದಲ್ಲಿ ಮುಖ್ಯಮಂತ್ರಿಯಾಗಿ ತಾವು ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ಈಗಾಗಲೇ ಘೋಷಿಸಿದ್ದಾರೆ.

ಇನ್ನು ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷ ಸ್ಪಷ್ಟ ಬಹುಮತ ಗಳಿಸಿ ಅಧಿಕಾರದ ಗದ್ದುಗೆಗೇರಲಿದೆ ಎಂದು ಹೇಳುತ್ತಿದ್ದರಾದರೂ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆಂಬ ಉತ್ತರ ಮೇ 15 ರ ಫಲಿತಾಂಶದ ಬಳಿಕ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...