alex Certify
ಕನ್ನಡ ದುನಿಯಾ       Mobile App
       

Kannada Duniya

ಪತಿ ಮೇಲಿನ ಸಿಟ್ಟಿಗೆ ಕಾರನ್ನು ಜಖಂಗೊಳಿಸಿದ ಪತ್ನಿ

ಮಂಡ್ಯ: ಗಂಡ-ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲೊಂದು ಗಂಡ-ಹೆಂಡತಿ ಜಗಳ ಮನೆಯಲ್ಲಿ ನಿಲ್ಲಿಸಿದ್ದ ಕಾರನ್ನೇ ಜಖಂಗೊಳಿಸಿ, ಪೊಲೀಸ್ ಠಾಣೆ ಮೆಟ್ಟಿಲೇರೋವರೆಗೂ ಬಂದಿದೆ.

ಹೌದು. ಮಂಡ್ಯ ಜಿಲ್ಲೆ ನಾಗಮಂಗಲದ ತಿಟ್ಟನಹೊಸಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರ ಪತ್ನಿ ಭಾಗ್ಯ, ಪತಿ ಮೇಲಿನ ಸಿಟ್ಟಿಗೆ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲನ್ನು ಎತ್ತಿಹಾಕಿ ಅದರ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಅಷ್ಟಕ್ಕೇ ನಿಲ್ಲದ ಅವರ ಕೋಪ ಗಂಡನನ್ನು ಬೈದು ಮನೆಯಿಂದಲೇ ಹೊರಹಾಕಿದ್ದಾರೆ.

ಪತ್ನಿ ಕಿರುಕುಳ ತಾಳಲಾರದ ಪತಿ ಶ್ರೀನಿವಾಸ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪತ್ನಿಯ ರೌದ್ರಾವತಾರವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಪೊಲೀಸರಿಗೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...