alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಲ್ಮೆಟ್ ಧರಿಸದಿದ್ದರೆ ದಂಡದ ಜೊತೆ ಕೌನ್ಸೆಲಿಂಗ್…!

ದೇಶದೆಲ್ಲೆಡೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಆದರೂ ಆನೇಕ ವಾಹನ ಸವಾರರು ಇದನ್ನು ಪಾಲಿಸುತ್ತಿಲ್ಲ. ಇದನ್ನು ನಿಯಂತ್ರಿಸುವ ಸಲುವಾಗಿ ಕೆಲವೆಡೆ ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ಹಾಕಬಾರದೆಂದು ಬಂಕ್ ಮಾಲೀಕರಿಗೆ ಸೂಚನೆ ನೀಡಲಾಗಿದೆ.

ಇದೀಗ ಹೆಲ್ಮೆಟ್ ಧರಿಸದವರಿಗೆ ದಂಡದ ಜೊತೆ ಒಂದು ಗಂಟೆಗಳ ಕಾಲ ಕೌನ್ಸೆಲಿಂಗ್ ನಡೆಸಲು ಶಿವಮೊಗ್ಗ ಪೊಲೀಸರು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಮಾಹಿತಿ ನೀಡಿದ್ದಾರೆ.

ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ದಂಡ ವಿಧಿಸಲಾಗುವುದಲ್ಲದೇ ಅವರಿಗೆ ಹೆಲ್ಮೆಟ್ ಬಳಕೆಯಿಂದಾಗುವ ಲಾಭದ ಕುರಿತು ಒಂದು ಗಂಟೆಗಳ ಕಾಲ ಜಾಗೃತಿ ಮಾಹಿತಿ ಇರುವ ವಿಡಿಯೋ ದೃಶ್ಯ ವೀಕ್ಷಣೆ ಜೊತೆಗೆ ಕೌನ್ಸೆಲಿಂಗ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...