alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಲ್ಮೆಟ್ ಧರಿಸದ ಮಹಿಳೆಗೆ ಲಾಠಿ ಏಟು

ಹೆಲ್ಮೆಟ್ ಹಾಕಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಹಿಳಾ ಹೋಂ ಗಾರ್ಡ್ ಮಹಿಳೆಯೊಬ್ಬರಿಗೆ ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಇಂದು ಶಿವಮೊಗ್ಗದ ಕರ್ನಾಟಕ ಸಂಘ ಬಳಿಯ ಸಿಗ್ನಲ್ ನಲ್ಲಿ ನಡೆದಿದೆ.

ಹಸೀನಾ ಬೇಗಂ ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಮಗ ತೌಫಿಕ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಸಿಗ್ನಲ್ ನಲ್ಲಿ ಪೊಲೀಸರು ತಡೆದು ಹೆಲ್ಮೆಟ್ ಎಲ್ಲಿ ಎಂದು ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಅಲ್ಲಿದ್ದ ಮಹಿಳಾ ಹೋಂ ಗಾರ್ಡ್ ಹಾಗೂ ಹಸೀನಾ ನಡುವೆ ಮಾತಿನ ಚಕಮಕಿ ನಡೆದಿದ್ದು, ಹೋಂ ಗಾರ್ಡ್ ಏಕಾಏಕಿ ಲಾಠಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಹಸೀನಾ ಬೇಗಂ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಸ್ಥಳೀಯರು ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಮಹಿಳೆಯ ಮೇಲೆ ಹೋಂ ಗಾರ್ಡ್ ಹಲ್ಲೆ ನಡೆಸಿದರೂ ಸ್ಥಳದಲ್ಲಿದ್ದ ಸಂಚಾರಿ ಪೊಲೀಸರು ತಡೆಯುವ ಯತ್ನ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...