alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

baby1

ಪತಿಯೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ತುಂಬು ಗರ್ಭಿಣಿಯೊಬ್ಬರು ನಡು ರಸ್ತೆಯಲ್ಲೇ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ಮಾನ್ವಿ ತಾಲೂಕಿನ ಚಾಗಭಾವಿ ಗ್ರಾಮದ ಹನುಮೇಶ್ ಎಂಬವರು ತಮ್ಮ ಪತ್ನಿ ಈರಮ್ಮರನ್ನು ಪಕ್ಕದ ಗುಡದಿನ್ನಿ ಗ್ರಾಮಕ್ಕೆ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದರು. ದಂಪತಿಗಳು ವಾಪಾಸ್ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಕಾರಣ ಗುಂಡಿ ಹಾರಿದ ವೇಳೆ ಈರಮ್ಮರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಸ್ಥಳೀಯ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಮಹಿಳೆಯರು ತಕ್ಷಣವೇ ನೆರವಿಗೆ ಧಾವಿಸಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...