alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡುಕ ಪತಿ ವರ್ತನೆಗೆ ಬೇಸತ್ತ ಮಹಿಳೆ: ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ

ಮೈಸೂರು: ಪತಿಯ ಕುಡುಕತನಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಈ ಘಟನೆ ನಡೆದಿದ್ದು, ಕಪಿಲಾ ನದಿಗೆ ಇಬ್ಬರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಮಹಿಳೆ ಮುಂದಾದ ವೇಳೆ ಅಲ್ಲಿದ್ದ ದೇವಾಲಯದ ಸಿಬ್ಬಂದಿ ಇದನ್ನು ಗಮನಿಸಿ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

6 ವರ್ಷದ ಹಿಂದೆ ಜಯಾ ಅವರು ಗ್ರಾನೈಟ್ ಕೆಲಸ ಮಾಡುತ್ತಿದ್ದ ಶಿವಕುಮಾರ್ ಎಂಬಾತನನ್ನು ವಿವಾಹವಾಗಿದ್ದರು. ಪತಿ ಶಿವಕುಮಾರ್ ಕುಡಿತದ ದಾಸನಾಗಿ, ದುಡಿದ ಹಣವನ್ನೆಲ್ಲ ತನ್ನ ಕುಡಿತಕ್ಕೆ ಹಾಳುಮಾಡುತ್ತಿದ್ದ. ಕುಟುಂಬ ನಿರ್ವಹಣೆ ಕಷ್ಟವಾದಾಗ ಜಯಾ ನೆರೆಹೊರೆಯವರಿಂದ ಕೈಸಾಲ ಪಡೆದು ಟೀ ಅಂಗಡಿ ಇಟ್ಟಿದ್ದರು. ಅದೂ ನಷ್ಟ ಆದಾಗ ಬೇಸತ್ತ ಜಯಾ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...