alex Certify
ಕನ್ನಡ ದುನಿಯಾ       Mobile App
       

Kannada Duniya

MG ರಸ್ತೆ ಕುರಿತು ಮಾಜಿ ಸಚಿವರು ಹೇಳಿದ್ದೇನು..?

dinesh-gunduraoಹೊಸ ವರ್ಷಾಚರಣೆ ಸಂಭ್ರಮದ ವೇಳೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಕುಡಿದ ಅಮಲಿನಲ್ಲಿದ್ದ ಕೆಲವರು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ವಿಚಾರ ರಾಷ್ಟ್ರದಾದ್ಯಂತ ದೊಡ್ಡ ಸುದ್ದಿಯಾಗಿತ್ತು.

ಇದಾದ ಬಳಿಕ ಪೊಲೀಸ್ ಇಲಾಖೆ ಆನೇಕ ಬಿಗಿ ಕ್ರಮಗಳನ್ನು ಕೈಗೊಂಡಿದ್ದರೂ ಕಾಮುಕರ ಅಟ್ಟಹಾಸ ಕಡಿಮೆಯಾಗಿಲ್ಲವೆಂಬ ವಿಚಾರ ಆಗಾಗ ಬೆಳಕಿಗೆ ಬರುತ್ತಿರುವ ಘಟನೆಗಳಿಂದ ಬಹಿರಂಗವಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಮನೆಗೆ ತೆರಳುತ್ತಿದ್ದ ಯುವತಿಯೊಬ್ಬಳನ್ನು ಕಾಮುಕ ಪೀಡಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಮಧ್ಯೆ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವರೊಬ್ಬರು ಬೆಂಗಳೂರು, ಮಹಿಳೆಯರ ಪಾಲಿಗೆ ಸುರಕ್ಷಿತವಲ್ಲವೆಂಬ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಸಮಾರಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಈ ಹಿಂದಿಗಿಂತಲೂ ಸುಧಾರಿಸಿದೆ ಎಂದು ಹೇಳುವುದರ ಜೊತೆಗೆ ರಾತ್ರಿ ವೇಳೆ ತಮ್ಮ ಮಗಳನ್ನು ಎಂ.ಜಿ. ರಸ್ತೆಗೆ ಕಳುಹಿಸುವುದಿಲ್ಲವೆಂದಿದ್ದಾರೆ.

ದಿನೇಶ್ ಗುಂಡೂರಾವ್ ಅವರ ಈ ಹೇಳಿಕೆಗೆ ಕೆಲವರು ಕಮೆಂಟ್ ಮಾಡಿದ್ದು, ಮಾಜಿ ಸಚಿವರೊಬ್ಬರು ಈ ಮಾತನ್ನು ಹೇಳುತ್ತಾರೆಂದರೆ ಇನ್ನು ಜನ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ್ದಾರೆ. ಆ ಪ್ರದೇಶದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...