alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮುಕರ ಕಿರುಕುಳಕ್ಕೆ ಬಲಿಯಾದ ವಿದ್ಯಾರ್ಥಿನಿ

ಯಾದಗಿರಿ: ಕಾಮುಕರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆ ಕಕ್ಕೇರಾ ಸಮೀಪದ ತಿಂಥಣಿ ಗ್ರಾಮದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಾರ್ಚ್ 19 ರಂದು ಬಟ್ಟೆ ತೊಳೆಯಲು ಹಳ್ಳಕ್ಕೆ ಹೋಗಿದ್ದ ಸಂದರ್ಭದಲ್ಲಿ 6 ಮಂದಿ ಕಾಮುಕರು ಲೈಂಗಿಕ ಕಿರುಕುಳ ನೀಡಿದ್ದಾರೆ.

ಇದರಿಂದ ಮನನೊಂದ ವಿದ್ಯಾರ್ಥಿನಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಶಾಂತಪುರ ಕ್ರಾಸ್ ಬಳಿ ಮೃತದೇಹವನ್ನಿಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳು ಪ್ರತಿಭಟನಾನಿರತರ ಮನವೊಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...