alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 8 ಮಂದಿ ಸಾವು

yadagiri-aa

ಯಾದಗಿರಿ: ಯಾದಗಿರಿ ತಾಲ್ಲೂಕಿನ ರಾಮಸಮುದ್ರ ಗ್ರಾಮದ ಸಮೀಪ, ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟಂಟಂನಲ್ಲಿದ್ದ 8 ಮಂದಿ ಸಾವು ಕಂಡು, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಐವರ ಸ್ಥಿತಿ ಗಂಭೀರವಾಗಿದೆ.

ಮೃತರು ಡಣಾಪುರ ಗ್ರಾಮದವರಾಗಿದ್ದು, ಶಹಾಪುರದಿಂದ ಎಂಗೇಜ್ ಮೆಂಟ್ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ಹೈದರಾಬಾದ್ ನಿಂದ ವಾಡಿ ಪಟ್ಟಣಕ್ಕೆ ತೆರಳುತ್ತಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...