alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮೋದಿ ಪರ ಘೋಷಣೆ

yadagir

ಯಾದಗಿರಿ: ಕೇಂದ್ರ ಸರ್ಕಾರದ ವಿರುದ್ಧ, ಇಲ್ಲಿನ ಮಾರುಕಟ್ಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ಪ್ರಧಾನಿ ಮೋದಿ ಪರವಾಗಿ ಘೋಷಣೆ ಕೂಗಲಾಗಿದೆ.

ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ್ದರಿಂದ, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಮಾರುಕಟ್ಟೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಹೇಳುತ್ತಿದ್ದಂತೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ‘ಜೈ’ ಎಂದು ಕೂಗಿದ್ದಾರೆ.

ಬಳಿಕ ಮೋದಿ ಹೆಸರು ಹೇಳುತ್ತಿದ್ದಂತೆ ಜೈಕಾರ ಕೂಗಿದ್ದಾರೆ. ಹೀಗೆ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮೋದಿ ಪರವಾಗಿ ಘೋಷಣೆ ಕೂಗಿದ್ದನ್ನು ಕಂಡ ಅಲ್ಲಿದ್ದ ಜನ ನಕ್ಕಿದ್ದು, ಮುಖಂಡರು ಮುಜುಗರ ಅನುಭವಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...