alex Certify
ಕನ್ನಡ ದುನಿಯಾ       Mobile App
       

Kannada Duniya

ಗುಪ್ತಾಂಗಕ್ಕೆ ಕಾರದಪುಡಿ ಎರಚಿ ರಾಕ್ಷಸೀಯ ಕೃತ್ಯ

ಯಾದಗಿರಿ: ಮಹಿಳೆಯ ಮೇಲೆ ಕುಟುಂಬದವರೇ ಅಮಾನವೀಯವಾಗಿ ಹಲ್ಲೆ ನಡೆಸಿ, ಗುಪ್ತಾಂಗಕ್ಕೆ ಕಾರದ ಪುಡಿ ಎರಚಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಮದನೂರ ಗ್ರಾಮದಲ್ಲಿ ನಡೆದಿದೆ.

ಪತಿ, ಅತ್ತೆ ಹಾಗೂ ಗಂಡನ ಸಹೋದರಿಯರು ವಿನಾಕಾರಣ ಮಹಿಳೆಯೊಂದಿಗೆ ಗಲಾಟೆ ಮಾಡಿದ್ದಾರೆ. ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಗುಪ್ತಾಂಗಕ್ಕೆ ಕಾರದ ಪುಡಿ ಎರಚಿದ್ದಲ್ಲದೇ, ಗಂಭೀರವಾಗಿ ಗಾಯಗೊಳಿಸಿದ್ದಾರೆ.

ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿ ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಕೆಂಬಾವಿ ಠಾಣೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...