alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಚಿಂಚನಸೂರ್ ಮೇಲೆ ಹಲ್ಲೆಗೆ ಯತ್ನ

baburao-chinchanasoorಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಬಾಬುರಾವ್ ಚಿಂಚನಸೂರ್ ಅವರ ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ಹಿನ್ನಲೆಯಲ್ಲಿ ಕಳೆದ ಒಂದು ವಾರದಿಂದ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯೂ ನಡೆದಿತ್ತು. ಇಂದು ಬೆಳಿಗ್ಗೆ ಆಯ್ಕೆಗೊಂಡ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಿದ್ದತೆ ನಡೆಸುತ್ತಿರುವಾಗಲೇ ಬಂದ ಫೋನ್ ಕರೆಯೊಂದು ಚಿತ್ರಣವನ್ನೇ ಬದಲಿಸಿತು.

ಅಂತಿಮ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಬದಲಿಸಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಬೆಂಬಲಿಗರಿಗೆ ಮಣೆ ಹಾಕಲಾಗಿದೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಕಛೇರಿಯಲ್ಲೇ ದಾಂಧಲೆ ನಡೆಸಿದ್ದಾರೆ. ಸಚಿವ ಬಾಬುರಾವ್ ಚಿಂಚನಸೂರ್ ಹಾಗೂ ಶಾಸಕ ಮಾಲಕರಡ್ಡಿಯವರ ಜೊತೆ ವಾಗ್ವಾದಕ್ಕಿಳಿದಿದಿದ್ದಲ್ಲದೇ ಅವರುಗಳಿದ್ದ ಕಾರಿನ ಮೇಲೆ ಕುರ್ಚಿ ಎಸೆದಿದ್ದಾರೆ. ಬಳಿಕ ಸಚಿವ ಹಾಗೂ ಶಾಸಕರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಅಲ್ಲಿಂದ ಕರೆದೊಯ್ಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...