alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ’

bsy 123 mn

ತುಮಕೂರು: ದೇಶದ ಗಮನ ಸೆಳೆದಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಬಿಜೆಪಿಯ ಗೆಲುವು ಪಕ್ಷಕ್ಕೆ ಇನ್ನಷ್ಟು ಶಕ್ತಿಯನ್ನು ತಂದಿದೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಜೆಪಿ ಹೆಜ್ಜೆ ಇಟ್ಟಿದೆ. ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗಳ ಮುನ್ಸೂಚನೆಯಾಗಿದೆ. ಕರ್ನಾಟಕವನ್ನು ಕೂಡ ಕಾಂಗ್ರೆಸ್ ಮುಕ್ತ ಮಾಡುವ ನಿಟ್ಟಿನಲ್ಲಿ ನಾವು ಬಿಜೆಪಿಯನ್ನು ಇನ್ನಷ್ಟು ಪ್ರಬಲವಾಗಿ ಸಂಘಟಿಸುತ್ತೇವೆ. ಇದರಲ್ಲಿ ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ. ಇನ್ನೂ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...