alex Certify
ಕನ್ನಡ ದುನಿಯಾ       Mobile App
       

Kannada Duniya

ವರಿಷ್ಠರ ಭೇಟಿಗೆ ಹೊರಟ ಬಿ.ಎಸ್. ಯಡಿಯೂರಪ್ಪ

bsy-28

ಬೆಂಗಳೂರು: ಕಿಕ್ ಬ್ಯಾಕ್ ಪ್ರಕರಣದಲ್ಲಿ ಆರೋಪಮುಕ್ತರಾಗಿರುವ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಹುಮ್ಮಸ್ಸಿನಲ್ಲಿದ್ದಾರೆ.

ದೋಷಮುಕ್ತರಾಗಿ ಕೋರ್ಟ್ ನಿಂದ ಹೊರಬಂದ ಯಡಿಯೂರಪ್ಪ, ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ನಿರಂತರ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಇದೀಗ ದೋಷಮುಕ್ತರಾದ ಬಳಿಕ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.

ಕಿಕ್ ಬ್ಯಾಕ್ ಪ್ರಕರಣದಿಂದ ಯಡಿಯೂರಪ್ಪನವರ ರಾಜಕೀಯ ಜೀವನಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇತ್ತು. ಆದರೆ, ಅವರು ದೋಷಮುಕ್ತರಾಗಿರುವುದರಿಂದ ಪಕ್ಷದಲ್ಲಿ ವರ್ಚಸ್ಸು ಹೆಚ್ಚಾಗಿದೆ. ಇದೇ ಕಾರಣಕ್ಕೆ ವರಿಷ್ಠರನ್ನು ಭೇಟಿ ಮಾಡಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ಇನ್ನು ಬಿ.ಎಸ್.ವೈ. ರಾಜ್ಯಾಧ್ಯಕ್ಷರಾದ ನಂತರ, ಏಕಪಕ್ಷೀಯವಾಗಿ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ದೆಹಲಿವರೆಗೂ ಹೋಗಿ ದೂರು ನೀಡಿದ್ದರು. ಯಡಿಯೂರಪ್ಪನವರ ವಿರೋಧದ ನಡುವೆಯೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ, ಸಮಾವೇಶ ನಡೆಸಿದ್ದರು. ಇಬ್ಬರೂ ನಾಯಕರು ಸಮಾಲೋಚನೆ ನಡೆಸಿ ಎಲ್ಲಾ ಗೊಂದಲ ಬಗೆಹರಿದಿದೆ ಎಂದು ಹೇಳಿದ್ದಾರೆ.

ಬಿ.ಜೆ.ಪಿ. ಹಿಂದುಳಿದ ವರ್ಗಗಳ ನಾಯಕತ್ವನ್ನು ಈಶ್ವರಪ್ಪನವರಿಗೆ ವಹಿಸುವ ಕುರಿತಾಗಿ ಯಾವುದೇ ಆಕ್ಷೇಪವಿಲ್ಲ ಎಂದು ಯಡಿಯೂರಪ್ಪ ಹೇಳಿದ್ದು, ಯಡಿಯೂರಪ್ಪ ದೋಷಮುಕ್ತರಾಗಿರುವುದು ಸಂತಸ ತಂದಿದೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಅವರೇ ಎಂದು ವರಿಷ್ಠರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಕಿಕ್ ಬ್ಯಾಕ್ ಪ್ರಕರಣದಲ್ಲಿ ಆರೋಪಮುಕ್ತರಾಗಿ ಹೊಸ ಹುಮ್ಮಸ್ಸಿನಲ್ಲಿರುವ ಯಡಿಯೂರಪ್ಪ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...