alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಬಿಗಿ ಭದ್ರತೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪನವರು ಇಂದು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ‘ಧವಳಗಿರಿ’ ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆಯನ್ನು ಏರ್ಪಡಿಸಿದ್ದಾರೆ.

ನಿಯಮದಂತೆ ಮುಖ್ಯಮಂತ್ರಿಗಳಿಗೆ ಭದ್ರತೆ ಒದಗಿಸಬೇಕಾದ ಪೊಲೀಸ್ ಇಲಾಖೆ ವತಿಯಿಂದ ಇದಕ್ಕಾಗಿ ಹಲವು ಪೊಲೀಸರನ್ನು ನಿವಾಸದ ಬಳಿ ನಿಯೋಜಿಸಲಾಗಿದೆಯಲ್ಲದೆ ಮೆಟಲ್ ಡಿಟೆಕ್ಟರ್ ಕೂಡಾ ಅಳವಡಿಸಲಾಗಿದೆ.

ಯಡಿಯೂರಪ್ಪನವರ ನಿವಾಸದ ಬಳಿ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಜಮಾಯಿಸಿದ್ದು, ತಮ್ಮ ನಾಯಕನನ್ನು ಅಭಿನಂದಿಸಲು ಕಾದು ನಿಂತಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಯಡಿಯೂರಪ್ಪನವರ ನಿವಾಸದಲ್ಲಿ ಪೂಜಾ ಕಾರ್ಯಗಳು ನಡೆದಿದ್ದು, ಬಳಿಕ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...