alex Certify
ಕನ್ನಡ ದುನಿಯಾ       Mobile App
       

Kannada Duniya

ರಾಧಾಕೃಷ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ಯಡಿಯೂರಪ್ಪ

ಇನ್ನು ಕೆಲ ಹೊತ್ತಿನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ರಾಜಭವನಕ್ಕೆ ತೆರಳುವ ಮುನ್ನ ಸಂಜಯ್ ನಗರದಲ್ಲಿರುವ ರಾಧಾಕೃಷ್ಣ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ನಿವಾಸದಲ್ಲಿ ಮೊದಲು ಪೂಜೆ ನೆರವೇರಿಸಿದ ಯಡಿಯೂರಪ್ಪನವರು ಬಳಿಕ ಕುಟುಂಬ ಸದಸ್ಯರು ಹಾಗೂ ಬಿಜೆಪಿ ನಾಯಕರೊಂದಿಗೆ ರಾಧಾಕೃಷ್ಣ ದೇವಾಲಯಕ್ಕೆ ತೆರಳಿದ್ದರು.

ಪೂಜೆ ನಂತರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವ ರಾಜಭವನಕ್ಕೆ ತೆರಳಿದ್ದು, ಕೆಲ ಹೊತ್ತಿನಲ್ಲೇ ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ರಾಜ್ಯಪಾಲ ವಜೂಭಾಯ್ ವಾಲಾರಿಂದ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...