alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಅಸಮಾಧಾನ

K_S_Eshwarappa

ರಾಯಚೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಏರತೊಡಗಿರುವಂತೆಯೇ, ಬಿ.ಜೆ.ಪಿ.ಯಲ್ಲಿಯೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಅಸಮಾಧಾನದ ಹೊಗೆ ಎದ್ದಿದೆ.

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಯಡಿಯೂರಪ್ಪನವರು, ಹೊಸ ತಂಡವನ್ನು ಕಟ್ಟಿದ್ದು, ವಿವಿಧ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಕೋರ್ ಕಮಿಟಿಯಲ್ಲಿ ಚರ್ಚಿಸದೇ, ಯಡಿಯೂರಪ್ಪನವರು ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಎಂಬ ಅಭಿಪ್ರಾಯ ಪಕ್ಷದಲ್ಲಿ ಕೇಳಿಬಂದಿದೆ ಎಂದು ತಿಳಿಸಿದ್ದಾರೆ.

ಬಿ.ಜೆ.ಪಿ. ಪದಾಧಿಕಾರಿಗಳನ್ನು ನೇಮಕ ಮಾಡಿರುವ ಬಗ್ಗೆ ಪಕ್ಷದಲ್ಲಿ ಅಪಸ್ವರ ಇದೆ. ಇದು ನನ್ನೊಬ್ಬನ ಅಭಿಪ್ರಾಯವಲ್ಲ, ಈ ಬಗ್ಗೆ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜಿಲ್ಲಾಮಟ್ಟದಲ್ಲಿ ಅನೇಕ ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿದವರು ಇದ್ದು, ಅವರನ್ನು ಕಡೆಗಣಿಸಲಾಗಿದೆ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...