alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವೆ ಎಂದ ಯಡಿಯೂರಪ್ಪ

bsy mn

ಯುಗಾದಿ ಹಬ್ಬದಂದೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ, ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ಎಸ್.ಯಡಿಯೂರಪ್ಪ, ತಮ್ಮ ಮೇಲೆ ವಿಶ್ವಾಸವಿಟ್ಟು ಪಕ್ಷದ ವರಿಷ್ಠರು, ಪಕ್ಷದ ಸಾರಥ್ಯವನ್ನು ವಹಿಸಿದ್ದು, ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ. ರಾಜ್ಯ ಸರ್ಕಾರದ ಆಡಳಿತದಿಂದ ರಾಜ್ಯದ ಜನ ಬೇಸರಗೊಂಡಿದ್ದಾರೆ. ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷವನ್ನು ಸಂಘಟಿಸುತ್ತೇನೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಾವೆಲ್ಲರೂ ಒಂದಾಗಿದ್ದೇವೆ. ಎಲ್ಲಾ ನಾಯಕರು, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ, ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ವಿವಿಧ ಕಡೆಗಳಲ್ಲಿ ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ವಿಜಯಪುರದಲ್ಲಿ ಬಸವನಗೌಡ ಪಾಟೀಲ್ ಸಂಭ್ರಮಾಚರಣೆ ಮಾಡಿದ್ದು, ವಿಶೇಷವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...