alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪಗೆ ಯುಗಾದಿಯಂದು ಭರ್ಜರಿ ಗಿಫ್ಟ್

bsy

ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಯುಗಾದಿ ಸಂಭ್ರಮವನ್ನು ಹೊತ್ತು ತಂದಿದೆ. ಅವರ ಆಸೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಹ್ಲಾದ್ ಜೋಶಿ ಅವರಿಂದ ತೆರವಾಗಲಿರುವ ಸ್ಥಾನವನ್ನು ಯಡಿಯೂರಪ್ಪ ತುಂಬಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರಿಗೆ, ರಾಜ್ಯದಲ್ಲಿ ಪಕ್ಷದ ಸಾರಥ್ಯವನ್ನು ವಹಿಸಿಕೊಳ್ಳುವಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ. ಪ್ರಹ್ಲಾದ್ ಜೋಶಿ ಅವಧಿ ಮುಗಿದ ನಂತರ, ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆಯೂ ಅಧ್ಯಕ್ಷರಾಗಿದ್ದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಚುನಾಯಿತರಾದ ಅವರು, ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು. ಆದರೂ, ಅವರು ರಾಜ್ಯ ರಾಜಕಾರಣದಲ್ಲಿಯೇ ಮುಂದುವರೆಯುವ ಇಚ್ಛೆ ವ್ಯಕ್ತಪಡಿಸಿದ್ದರು. ಕಾರ್ಯಕಾರಿಣಿ ಸಭೆಗೆ ಗೈರು ಹಾಜರಾಗಿ ದೆಹಲಿಗೆ ಹೋಗಿ ಬಂದಿದ್ದರು. ಯಡಿಯೂರಪ್ಪ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರೆ, ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಬಹುದೆಂಬ ಕಾರಣಕ್ಕೆ ಅವರಿಗೆ ರಾಜ್ಯದ ಬಿಜೆಪಿ ಸಾರಥ್ಯ ನೀಡಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...