alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಂಗ್ರೆಸ್ ಮುಕ್ತ ಮಾಡುವವರು ಮೊದಲು ಆರೋಪ ಮುಕ್ತರಾಗಲಿ’

siddaramaiah_ka

ಬೆಂಗಳೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ಧರಾಮಯ್ಯ, ನಮ್ಮ ಸರ್ಕಾರ, ಮಹಿಳೆಯರು, ಬಡವರು, ದಲಿತರು, ಹಿಂದುಳಿದ ವರ್ಗದ ಜನರ ಪರವಾಗಿದೆ. ರಾಜಕೀಯ ಕಾರಣಗಳಿಗಾಗಿ ಕೆಲವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಾಡಿದವರು, ಜೈಲಿಗೆ ಹೋಗಿ ಬಂದವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎನ್ನುತ್ತಾರೆ. ನಾವು ಹಸಿವು ಮುಕ್ತ, ಬಡತನ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾವೆಂದೂ ಬಿಜೆಪಿ ಮುಕ್ತ ಮಾಡುತ್ತೇವೆ ಎಂದು ಹೇಳಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ಇರಬೇಕು. ಒಂದೇ ಪಕ್ಷವಿರಬಾರದು. ಆಡಳಿತ, ವಿರೋಧ ಪಕ್ಷದವರು ಇದ್ದರಷ್ಟೇ ಪ್ರಜಾಪ್ರಭುತ್ವಕ್ಕೆ ಲಕ್ಷಣ ಎಂದ ಅವರು, ಕರ್ನಾಟವನ್ನು ಕಾಂಗ್ರೆಸ್ ಮುಕ್ತ ಮಾಡುವವರು ಮೊದಲು ಆರೋಪ ಮುಕ್ತರಾಗಲಿ ಎಂದು ಕುಟುಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...