alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದ ಕೊನೆ ಸಿಎಂ’

bsy

ಬೆಂಗಳೂರು: ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬಿದ್ದರೂ, ಸಾಧನೆ ಮಾತ್ರ ಶೂನ್ಯವಾಗಿದೆ. ಇಂತಹ ಅಭಿವೃದ್ಧಿ ಶೂನ್ಯ ಸರ್ಕಾರದ ಕ್ಯಾಪ್ಟನ್ ಆಗಿ ಸಿದ್ಧರಾಮಯ್ಯ ಅವರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯ ಕಾಣುತ್ತಿದೆ. ಸಿದ್ಧರಾಮಯ್ಯನವರು ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರ ರೈತರು, ದಲಿತರು, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಒತ್ತು ನೀಡಿಲ್ಲ. ಸಚಿವರ ನಡುವೆ ಹೊಂದಾಣಿಕೆಯೂ ಕಂಡು ಬರುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬರ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ದೂರಿದ್ದಾರೆ.

ಕಳೆದ ವರ್ಷ ಮುಂಗಾರಿನ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ನೀಡಿರುವ ಅನುದಾನವನ್ನು ಖರ್ಚು ಮಾಡಿಲ್ಲ. ಕಳೆದ 3 ವರ್ಷಗಳಲ್ಲಿ 70 ಸಾವಿರ ಕೋಟಿ ರೂ.ಗೂ ಅಧಿಕ ಸಾಲ ಮಾಡಲಾಗಿದೆ. ಈ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...