alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ವಿರುದ್ಧ ಮತ್ತೆ ಏಕವಚನ ಬಳಸಿದ ಯಡಿಯೂರಪ್ಪ

bsy

ಚಿತ್ರದುರ್ಗ: ರಾಜ್ಯದಲ್ಲಿನ ಬರ ಪರಿಸ್ಥಿತಿ ಪರಿಶೀಲನೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏಕವಚನದಲ್ಲಿ ಟೀಕಿಸಿದ್ದರು.

ಇದಕ್ಕೆ ಪ್ರತ್ಯುತ್ತರ ನೀಡಿದ್ದ ಸಿಎಂ ಕೂಡ, ಏಕವಚನದಲ್ಲಿಯೇ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದರು. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ ಮುಂದುವರೆದಿದ್ದು, ಭಾನುವಾರ ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿಯಲ್ಲಿ ಬರ ಸ್ಥಿತಿ ವೀಕ್ಷಣೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರ ಅನುದಾನ ನೀಡಿದ್ದರೂ, ಈ ಪುಣ್ಯಾತ್ಮ ಖರ್ಚು ಮಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಜನರ ಹಣವನ್ನು ಖರ್ಚು ಮಾಡಲು ನಿನಗೇನು ಧಾಡಿಯಾಗಿದೆ ಎಂದು ಏಕವಚನದಲ್ಲಿಯೇ ಪ್ರಶ್ನಿಸಿದ ಯಡಿಯೂರಪ್ಪ, ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಜನ, ಜಾನುವಾರುಗಳಿಗೆ ನೀರು ಒದಗಿಸುತ್ತಿಲ್ಲ. ಗೋಶಾಲೆ ಆರಂಭಿಸಿಲ್ಲ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...