alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪರೊಬ್ಬರಿಂದಲೇ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರು ಹಾಗೂ ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಬ್ಬರೇ ಇಂದು ಪದಗ್ರಹಣ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಇನ್ನೂ ನಾಲ್ವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗಿತ್ತಾದರೂ ಇಂದು ಯಡಿಯೂರಪ್ಪನವರೊಬ್ಬರೇ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೆ.ಎಸ್. ಈಶ್ವರಪ್ಪ, ಶ್ರೀರಾಮುಲು, ಆರ್. ಅಶೋಕ್ ಹಾಗೂ ಗೋವಿಂದ ಕಾರಜೋಳ ಸಚಿವರಾಗಲಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಬಹುಮತ ಸಾಬೀತುಪಡಿಸಿದ ನಂತರ ಸಚಿವ ಸಂಪುಟವನ್ನು ರಚಿಸಲಾಗುತ್ತೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...