alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಟೀಂ ನಲ್ಲಿ ಯಾರೆಲ್ಲಾ ಇರ್ತಾರೆ?

bsy 21 a

ಬೆಂಗಳೂರು: ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಟೀಂ ರಚಿಸಲಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಈಗಾಗಲೇ ತಯಾರಿ ನಡೆಸಿದ್ದು, ಯಾರನ್ನೆಲ್ಲಾ ಸೇರಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬಿ.ಎಸ್.ವೈ. ಅಧ್ಯಕ್ಷರಾಗುತ್ತಿದ್ದಂತೆ ಹೊಸ ತಂಡ ರಚನೆಯಾಗುತ್ತಿದ್ದು, ಕೋರ್ ಕಮಿಟಿಯಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ. ಬಿಜೆಪಿಯಲ್ಲಿ ಮಹತ್ವದ ಹುದ್ದೆ ಎಂದೇ ಹೇಳಲಾಗುವ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಸಂತೋಷ್ ಜೀ ಅವರನ್ನು ಬದಲಿಸಿ ಬೇರೆಯವರನ್ನು ನೇಮಕ ಮಾಡುವ ಸಾಧ್ಯತೆ ಇದೆ. ಅಲ್ಲದೇ, ಎಲ್ಲಾ ವರ್ಗ, ಪ್ರದೇಶದ ನಾಯಕರಿಗೆ ಪಕ್ಷದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎನ್ನಲಾಗಿದ್ದು, ಯಾರೆಲ್ಲಾ ಟೀಂ ಸೇರಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬಿಜೆಪಿ ಪದಾಧಿಕಾರಿಗಳ ರಚನೆ ಮತ್ತು ಕೋರ್ ಕಮಿಟಿಗೆ ಯಾರನ್ನು ಸೇರಿಸಿಕೊಳ್ಳಬೇಕೆಂದು ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಕೋರ್ ಕಮಿಟಿಯಲ್ಲಿ ಹಿರಿಯ ನಾಯಕರು, ಕೇಂದ್ರ ಸಚಿವರು ಸೇರಿದಂತೆ ಹಲವರು ಸೇರಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...