alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ರೈತರಿಗೆ ಇಂದು ಸಿಹಿ ಸುದ್ದಿ ನೀಡಲಿದ್ದರಾ ಯಡಿಯೂರಪ್ಪ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕಾರದ ಬಳಿಕ ವಿಧಾನಸೌಧಕ್ಕೆ ತೆರಳಲಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನೂತನ ಮುಖ್ಯಮಂತ್ರಿಗಳ ಸ್ವಾಗತಕ್ಕಾಗಿ ವಿಧಾನಸೌಧವೂ ಸಜ್ಜುಗೊಂಡಿದ್ದು, ಯಡಿಯೂರಪ್ಪನವರ ಆಗಮನದ ನಿರೀಕ್ಷೆಯಲ್ಲಿ ಸಿಬ್ಬಂದಿಗಳಿದ್ದಾರೆ.

ಈ ಮಧ್ಯೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪನವರು ನೀಡಿದ್ದ ರಾಜ್ಯದ ರೈತರ ಸಾಲಮನ್ನಾ ಘೋಷಣೆ ಕುರಿತು ಈಗ ಕುತೂಹಲ ಮನೆ ಮಾಡಿದೆ. ತಾವು ಅಧಿಕಾರ ವಹಿಸಿಕೊಂಡ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಯಡಿಯೂರಪ್ಪನವರು ಭರವಸೆ ನೀಡಿದ್ದು, ಇಂದು ಈ ಕುರಿತು ಮಹತ್ವದ ಆದೇಶ ಹೊರ ಬೀಳಲಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...