alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲೀಗ ಯಾತ್ರೆ ರಾಜಕೀಯ

ಮುಂದಿನ ವಿಧಾನಸಭೆ ಚುನಾವಣೆಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿ.ಜೆ.ಪಿ., ಜೆ.ಡಿ.ಎಸ್. ಹಾಗೂ ಕಾಂಗ್ರೆಸ್ ಈಗಾಗಲೇ ಕಾರ್ಯತಂತ್ರ ರೂಪಿಸಿವೆ. ಮತದಾರರನ್ನು ಸೆಳೆಯಲು ಈಗಿನಿಂದಲೇ ಕಾರ್ಯೋನ್ಮುಖವಾಗಿದ್ದು, ಇದರ ಭಾಗವಾಗಿ ಯಾತ್ರೆ ಕೈಗೊಂಡಿವೆ.

ಬಿ.ಜೆ.ಪಿ. ನವ ಕರ್ನಾಟಕ ಪರಿವರ್ತನಾ ಯಾತ್ರೆ ಹೆಸರಲ್ಲಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರಗಳಿಗೂ ಭೇಟಿ ನೀಡಲು ಯೋಜಿಸಿದೆ. ಈಗಾಗಲೇ ಯಾತ್ರೆ ಆರಂಭವಾಗಿದ್ದು, 3 ನೇ ದಿನಕ್ಕೆ ಕಾಲಿಟ್ಟಿದೆ. ಯಾತ್ರೆಗಾಗಿ ವಿಶೇಷ ವಾಹನ ಸಿದ್ಧಪಡಿಸಲಾಗಿದ್ದು, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ನಾಯಕರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಬಿ.ಜೆ.ಪಿ.ಗೆ ಟಾಂಗ್ ಕೊಡಲು ಸಿದ್ಧವಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಜನಾಶೀರ್ವಾದ ಯಾತ್ರೆ ಕೈಗೊಳ್ಳಲು ಮುಂದಾಗಿದ್ದಾರೆ. ಕೆ.ಪಿ.ಸಿ.ಸಿ. ವತಿಯಿಂದ ಈಗಾಗಲೇ ಯಾತ್ರೆಗೆ ಸಿದ್ಧತೆಗಳು ನಡೆದಿವೆ. ವಿಶೇಷವಾದ ವಾಹನವನ್ನು ಯಾತ್ರೆಗಾಗಿ ಸಿದ್ಧಪಡಿಸಲಾಗ್ತಿದೆ. ಎಲ್ಲಾ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡುವ ಜೊತೆಗೆ ಪ್ರತಿ ಜಿಲ್ಲೆಗಳಲ್ಲಿ 3 ಬೃಹತ್ ಸಮಾವೇಶಗಳನ್ನು ನಡೆಸಲು ಪ್ಲಾನ್ ಮಾಡಲಾಗಿದೆ.

ಇನ್ನು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಿಂದಿನಿಂದಲೂ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ವಿಶ್ರಾಂತಿಯಲ್ಲಿದ್ದ ಅವರು ನವೆಂಬರ್ 7 ರಿಂದ ಯಾತ್ರೆ ಆರಂಭಿಸಲಿದ್ದಾರೆ. ಕರ್ನಾಟಕ ವಿಕಾಸ ವಾಹಿನಿ ಹೆಸರಲ್ಲಿ ಕುಮಾರಸ್ವಾಮಿ ಕೈಗೊಳ್ಳಲಿರುವ ಯಾತ್ರೆಗೆ ವಿಶೇಷ ಬಸ್ ಸಿದ್ಧವಾಗಿದೆ. ಹೀಗೆ ಮೂರೂ ಪಕ್ಷಗಳು ಯಾತ್ರೆ ಕೈಗೊಂಡಿದ್ದು, ಮುಂದಿನ ಚುನಾವಣೆಯ ಕಾವು ಏರತೊಡಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...