alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಮಾಣವಚನಕ್ಕೂ ಮೊದಲೇ ಯಡಿಯೂರಪ್ಪನವರಿಗೆ ಎದುರಾಗಲಿದೆ ಪ್ರತಿಭಟನೆ

ಕಳೆದ ರಾತ್ರಿ ನಡೆದ ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪನವರ ಹಾದಿ ಸುಗಮವಾಗಿದೆ. ರಾಜ್ಯಪಾಲರ ತೀರ್ಮಾನಕ್ಕೆ ಮಧ್ಯೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿರುವ ಹಿನ್ನಲೆಯಲ್ಲಿ ನಿಗದಿಯಂತೆ ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ರಾಜ್ಯಪಾಲ ವಜೂಭಾಯ್ ವಾಲಾ, ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಈ ಪಕ್ಷಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ರಾಜಭವನದ ಎದುರು ಕಾಂಗ್ರೆಸ್-ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ರಾಜಭವನದ ಬಳಿ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ಯಡಿಯೂರಪ್ಪನವರ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ಆಯ್ದ ಗಣ್ಯರಿಗಷ್ಟೇ ಪ್ರವೇಶಾವಕಾಶವಿದ್ದು, 9 ಗಂಟೆ ಹೊತ್ತಿಗೆ ರಾಜ್ಯಪಾಲ ವಜೂಭಾಯ್ ವಾಲಾ ಯಡಿಯೂರಪ್ಪನವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...