alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ವಿರುದ್ದ ಈಶ್ವರಪ್ಪ ಪರೋಕ್ಷ ವಾಗ್ದಾಳಿ

eshwarappa-yeddyurappaಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪನವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆಂದು ಹೇಳಲಾಗಿದೆ.

ಕೆಲವರು 7 ತಿಂಗಳಿಗೆ ಹುಟ್ಟಿದವರಂತೆ ಆಡುತ್ತಿದ್ದಾರೆ. ಬ್ರಿಗೇಡ್ ನ ತಾಕತ್ತೇನು ಎಂಬುದನ್ನು ಅಂತವರಿಗೆ ತೋರಿಸೋಣಾ ಎಂದು ಗುಡುಗಿರುವ ಈಶ್ವರಪ್ಪ, ಬ್ರಿಗೇಡ್ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಆಹ್ವಾನಿಸೋಣವೆಂದು ಹೇಳಿದ್ದಾರೆನ್ನಲಾಗಿದೆ.

ರಚನಾತ್ಮಕ ಕಾರ್ಯಗಳ ಮೂಲಕ ಬ್ರಿಗೇಡ್ ಕಾರ್ಯ ಚಟುವಟಿಕೆ ಮುಂದುವರೆಯಬೇಕು. ಜೊತೆಗೆ ಈಶ್ವರಪ್ಪನವರಿಗೆ ಎಲ್ಲ ಹಂತದಲ್ಲೂ ಬೆಂಬಲ ನೀಡುವ ಕುರಿತು ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...