alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಿರ್ಗಮಿಸಲಿದ್ದರಾ ಯಡಿಯೂರಪ್ಪ…?

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ವಿರುದ್ಧ ಹಿರಿಯ ಮುಖಂಡರು ತಿರುಗಿ ಬಿದ್ದಿರುವ ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷರ ಬದಲಾವಣೆಯ ಮಾತುಗಳನ್ನಾಡಿರುವುದು ಕುತೂಹಲ ಕೆರಳಿಸಿದೆ.

ಮಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆ ಮಾತನಾಡಿರುವ ಅಮಿತ್ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಸ್ಥಾನಕ್ಕೆ ಯಾರನ್ನು ತರುವುದು ಸೂಕ್ತ ಎಂದು ಕೇಳಿದ್ದಾರೆನ್ನಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಗೂ ಮುನ್ನವೇ ಯಡಿಯೂರಪ್ಪರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಲಾಗುತ್ತದಾ ಎಂಬ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ನಡೆದ ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು, ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಡೆಗೆ ಮಾತ್ರ ಗಮನ ಕೊಟ್ಟಿದ್ದರು ಎಂಬ ಆರೋಪಗಳು ಕೇಳಿಬಂದಿದ್ದರ ಮಧ್ಯೆ, ಅಮಿತ್ ಶಾ ಅವರ ಈ ನಡೆ ಹಲವು ವದಂತಿಗಳಿಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...