alex Certify
ಕನ್ನಡ ದುನಿಯಾ       Mobile App
       

Kannada Duniya

ಹಸಿರು ಶಾಲು ಧರಿಸಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ

ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಇಂದು ಬೆಳಿಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಭಾಯ್ ವಾಲಾ ಯಡಿಯೂರಪ್ಪನವರಿಗೆ ಪ್ರಮಾಣವಚನ ಬೋಧಿಸಿದ್ದು, ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಯಡಿಯೂರಪ್ಪನವರು ಹಸಿರು ಶಾಲು ಧರಿಸಿದ್ದರು.

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಯಡಿಯೂರಪ್ಪನವರು ತಮ್ಮ ನಿವಾಸ ಹಾಗೂ ರಾಧಾಕೃಷ್ಣ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿದ್ದು, ಅಲ್ಲಿ ಈ ಮೊದಲೇ ಇದ್ದ ಬಿಜೆಪಿ ಹಿರಿಯ ನಾಯಕರು ನೂತನ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಅಭಿನಂದಿಸಿದರು.

ಬಳಿಕ ರಾಜ್ಯಪಾಲ ವಜೂಭಾಯ್ ವಾಲಾ ಆಗಮಿಸಿದ್ದು, ಮೊದಲಿಗೆ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಬಳಿಕ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಪ್ರಮಾಣವಚನ ಸ್ವೀಕರಿಸಲು ವೇದಿಕೆಗೆ ಆಹ್ವಾನಿಸುತ್ತಿದ್ದಂತೆಯೇ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ದೇವರು ಹಾಗೂ ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...