alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಯಡಿಯೂರಪ್ಪರಿಂದ ಪ್ರಮಾಣವಚನ…?

ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದೆ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಧಿಕಾರ ಹಿಡಿಯಲು ಸಜ್ಜಾಗುತ್ತಿರುವ ಬೆನ್ನಲ್ಲೇ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆಂದು ಹೇಳಲಾಗಿದ್ದು, ಬಹುಮತ ಸಾಬೀತಿಗೆ ಒಂದು ವಾರ ಕಾಲಾವಕಾಶ ಸಿಗುವ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದಾರೆನ್ನಲಾಗಿದೆ.

ರಾಜ್ಯ ರಾಜಧಾನಿಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿಯ ‘ಅಪರೇಷನ್ ಕಮಲ’ ದ ಭೀತಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್ ನಲ್ಲಿ ಇರಿಸಿಕೊಳ್ಳಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. ಇತ್ತ ಬಿಜೆಪಿ ಪಾಳೆಯದಲ್ಲಿ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಮ್ಮಡಿಸಿದ್ದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಬಿಜೆಪಿ ನಾಯಕ ಪ್ರಕಾಶ್ ಜಾವಡೇಕರ್, ಬಿಜೆಪಿ ಕುದುರೆ ವ್ಯಾಪಾರಕ್ಕೆ ಮುಂದಾಗಿಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದ ಬೇಸರಗೊಂಡಿರುವ ಕೆಲ ಶಾಸಕರು ಮಾತುಕತೆ ನಡೆಸಿದ್ದಾರೆ ಎನ್ನುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...