alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತರ ಆಕ್ರೋಶಕ್ಕೆ ಸೊಪ್ಪು ಹಾಕದ ಯಡಿಯೂರಪ್ಪ

yeddyurappa 33457ಬಿಜೆಪಿ ಜಿಲ್ಲಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳ ನೇಮಕಾತಿ ವೇಳೆ ಯಾರೊಂದಿಗೂ ಸಮಾಲೋಚಿಸದೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆಂದು ಆರೋಪಿಸಿ ಪಕ್ಷದ ಕಛೇರಿಯಲ್ಲೇ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ಸಭೆ ನಡೆಸಿ ಹೈಕಮಾಂಡ್ ಗಮನಕ್ಕೆ ತರಲು ಮುಂದಾಗಿರುವ ಮಧ್ಯೆ ಇದ್ಯಾವುದಕ್ಕೂ ಸೊಪ್ಪು ಹಾಕದ ಯಡಿಯೂರಪ್ಪ ಇಂದು ಜಿಲ್ಲಾ ಪ್ರಭಾರಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ಅತೃಪ್ತರ ಆಕ್ರೋಶಕ್ಕೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.

ಈಶ್ವರಪ್ಪನವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಯಡಿಯೂರಪ್ಪನವರು ಯಾರೊಂದಿಗೂ ಸಮಾಲೋಚಿಸದೆ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಈ ಕುರಿತು ಕೇಳಲು ಹೋದರೆ ಶೋಭಾ ಕರಂದ್ಲಾಜೆಯವರ ಬಳಿ ಮಾತನಾಡಿ ಎನ್ನುತ್ತಾರೆ ಎಂದು ಹಲವರು ಅಳಲು ತೋಡಿಕೊಂಡಿದ್ದರಲ್ಲದೇ ಮೂಲ ಬಿಜೆಪಿಗರನ್ನು ಕಡೆಗಣಿಸಿ ಕೆಜೆಪಿಯಿಂದ ಬಂದವರಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಿದ್ದರು. ಅಲ್ಲದೇ ಶೋಭಾ ಕರಂದ್ಲಾಜೆಯವರು ಎಲ್ಲ ವಿಚಾರದಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಶೋಭಾ ಕರಂದ್ಲಾಜೆಯವರು, ಕಳೆದ 10 ವರ್ಷಗಳಿಂದಲೂ ಹಸ್ತಕ್ಷೇಪದ ಮಾತು ಕೇಳಿ ಸಾಕಾಗಿದೆ. ಯಾವ ವಿಚಾರವೆಂಬುದನ್ನು ಅವರು ಬಿಡಿಸಿ ಹೇಳಬೇಕಲ್ಲ ಎಂದಿದ್ದಾರಲ್ಲದೇ ಎಲ್ಲರೊಂದಿಗೆ ಸಮಾಲೋಚಿಸಿಯೇ ಯಡಿಯೂರಪ್ಪನವರು ತೀರ್ಮಾನ ತೆಗೆದುಕೊಂಡಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಲವಾರು ಮಂದಿ ಆಕಾಂಕ್ಷಿಗಳಿರುತ್ತಾರಾದರೂ ಒಬ್ಬರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸಾಧ್ಯ ಎಂದು ಹೇಳಿದ್ದಾರೆ. ಈ ಮಧ್ಯೆ ಇಂದು ಜಿಲ್ಲಾ ಪ್ರಭಾರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಇದಕ್ಕೆ ಅತೃಪ್ತರು ಮತ್ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...