alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಜೊತೆ ಸಚಿವರಾಗಿ ನಾಲ್ವರ ಪ್ರಮಾಣವಚನ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, 9 ಗಂಟೆಗೆ ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ನಿಗದಿಯಾಗಿದೆ.

ಈ ಮೊದಲು ಯಡಿಯೂರಪ್ಪನವರೊಬ್ಬರೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಬಹುಮತ ಸಾಬೀತುಪಡಿಸಿದ ನಂತರ ತಮ್ಮ ಸಚಿವ ಸಂಪುಟವನ್ನು ರಚಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ ಲಭ್ಯ ಮಾಹಿತಿಯಂತೆ ಯಡಿಯೂರಪ್ಪನವರ ಜೊತೆ ಇನ್ನೂ ನಾಲ್ವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ ಅದಿನ್ನೂ ಖಚಿತವಾಗಿಲ್ಲ.

ಕೆ.ಎಸ್. ಈಶ್ವರಪ್ಪ, ಬಿ. ಶ್ರೀರಾಮುಲು, ಆರ್. ಅಶೋಕ್ ಹಾಗೂ ಗೋವಿಂದ ಕಾರಜೋಳ ಯಡಿಯೂರಪ್ಪನವರೊಂದಿಗೆ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆನ್ನಲಾಗಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ಈ ವಿಚಾರ ಖಚಿತಗೊಳ್ಳಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...