alex Certify
ಕನ್ನಡ ದುನಿಯಾ       Mobile App
       

Kannada Duniya

“ಸಾಲ ಮನ್ನಾಕ್ಕೆ ನಾನು ಬದ್ಧ: ಇನ್ನೆರಡು ದಿನಗಳಲ್ಲಿ ಭರವಸೆ ಈಡೇರಿಸುತ್ತೇನೆ’’

ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಏನೇ ಮಾಡಿದ್ರೂ ಜನರ ಬೆಂಬಲ ನನಗಿದೆ. ಜನರು ಮತ್ತೆ ನಮ್ಮನ್ನು ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ವಿಶ್ವಾಸ ಯಾಚನೆ ವೇಳೆ ನಾನು ಗೆದ್ದೇ ಗೆಲ್ತೇನೆ ಎಂಬ ವಿಶ್ವಾಸ ನನಗಿದೆ. ಜೆಡಿಎಸ್-ಕಾಂಗ್ರೆಸ್ ಶಾಸಕರು ನನಗೆ ಬೆಂಬಲ ನೀಡ್ತಾರೆಂಬ ನಂಬಿಕೆಯಿದೆ. ವಿಶ್ವಾಸಮತದ ಬಗ್ಗೆ ಚರ್ಚೆ ಈಗ ಅನಗತ್ಯ ಎಂದು ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿ ವೇಳೆ ಯಡಿಯೂರಪ್ಪ ಪ್ರಧಾನ ಮಂತ್ರಿ ಸೇರಿದಂತೆ ಹಿರಿಯ ನಾಯಕರಿಗೆ ಧನ್ಯವಾದ ಹೇಳಿದ್ರು.

ನಿರೀಕ್ಷೆಯಂತೆ ಯಡಿಯೂರಪ್ಪ ರೈತರ ಸಾಲ ಮನ್ನಾ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಸಾಲ ಮನ್ನಾ ಭರವಸೆ ನೀಡಿದ್ದೆ. 1 ಲಕ್ಷದವರೆಗಿನ ಸಾಲ ಮನ್ನಾಕ್ಕೆ ನಾನು ಬದ್ಧನಾಗಿದ್ದೇನೆ. ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಹಾಗೂ ನೇಕಾರರ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುತ್ತೇನೆ.  ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಭರವಸೆ ಈಡೇರಿಸುತ್ತೇನೆ ಎಂದು ವಿಧಾನಸೌಧದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.

ಮ್ಯಾಜಿಕ್ ನಂಬರ್ ಬಗ್ಗೆಯೂ ಮಾತನಾಡಿದ ಯಡಿಯೂರಪ್ಪ ಇದು ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಸ್ವಲ್ಪ ಸಮಯ ಕಾದುನೋಡಿ ಎಂದು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...