alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕಾರಿಪುರದಿಂದಲೇ ಸ್ಪರ್ಧೆ ಎಂದ ಯಡಿಯೂರಪ್ಪ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಉತ್ತರ ಕರ್ನಾಟಕದ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂದು ಕೇಳಿ ಬರುತ್ತಿದ್ದ ವದಂತಿಗಳಿಗೆ ಸ್ವತಃ ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ಬಾಗಲಕೋಟೆಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕಾರಿಪುರ ಕ್ಷೇತ್ರದ ಜನತೆಯ ಅಪೇಕ್ಷೆಯಂತೆ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದೇನೆ. ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಸೂಚಿಸಿರುವ ವರಿಷ್ಟರ ಮನವೊಲಿಸುತ್ತೇನೆ ಎಂದು ಹೇಳಿದ್ದಾರೆ.

ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸಿದ್ದು ಸವದಿ ಕಣಕ್ಕಿಳಿಯಲಿದ್ದಾರೆಂದು ಸ್ಪಷ್ಟಪಡಿಸಿದ ಯಡಿಯೂರಪ್ಪ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಸದ್ಯದಲ್ಲೇ ರಾಜ್ಯದ ಕೆಲ ಸಚಿವರ ಮನೆಗಳ ಮೇಲೆ ಐಟಿ ದಾಳಿ ನಡೆಯುವ ಸಾಧ್ಯತೆಯಿದ್ದು, ಇದರಿಂದ ಹತಾಶೆಗೊಳಗಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐಟಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಲು ಮುಂದಾಗಿದ್ದರೆಂದು ಆರೋಪಿಸಿದ ಯಡಿಯೂರಪ್ಪನವರು, ಇನ್ನೆರೆಡು ದಿನಗಳಲ್ಲಿ ರಾಜ್ಯ ಸರ್ಕಾರ ನಡೆಸಿರುವ ಹಗರಣಗಳ ದಾಖಲೆಗಳನ್ನು ಬಿ.ಜೆ. ಪುಟ್ಟಸ್ವಾಮಿ ಬಿಡುಗಡೆ ಮಾಡಲಿದ್ದಾರೆಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...