alex Certify
ಕನ್ನಡ ದುನಿಯಾ       Mobile App
       

Kannada Duniya

ದೇವೇಗೌಡರ ವಿರುದ್ಧ ಯಡಿಯೂರಪ್ಪರಿಂದ ಗಂಭೀರ ಆರೋಪ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಕೆಲವರು ಬಂದ್ ಗೆ ಕರೆ ನೀಡಿರುವ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿನ ಹಿಂದೆ ದೇವೇಗೌಡರಿದ್ದು, ರಾಜ್ಯ ಪ್ರತ್ಯೇಕಗೊಂಡರೆ ದಕ್ಷಿಣದಲ್ಲಿ ಜೆಡಿಎಸ್ ಬಲವರ್ಧನೆ ಮಾಡಬಹುದೆಂಬ ಲೆಕ್ಕಾಚಾರವನ್ನು ದೇವೇಗೌಡರು ಹೊಂದಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯವನ್ನು ಪ್ರತ್ಯೇಕಿಸುವ ತಂತ್ರ ನಡೆಸಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ನವರ ಮೌನವೂ ಅನುಮಾನಕ್ಕೆ ಕಾರಣವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಹಿಂದೆ ಕಾಂಗ್ರೆಸ್ ನವರು ವೀರಶೈವ ಲಿಂಗಾಯಿತರನ್ನು ವಿಭಜಿಸಲು ಮುಂದಾದಂತೆ ಈಗ ಏಕೀಕೃತ ಕರ್ನಾಟಕವನ್ನು ಒಡೆಯಲು ದೇವೇಗೌಡ ಹಾಗೂ ಕುಮಾರಸ್ವಾಮಿ ಯತ್ನ ನಡೆಸಿದ್ದಾರೆ. ರಾಜ್ಯದ ಜನತೆ ಇದನ್ನು ಒಪ್ಪುವುದಿಲ್ಲವೆಂದು ಯಡಿಯೂರಪ್ಪ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...