alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಧವಳಗಿರಿ ನಿವಾಸದ ಸುತ್ತ ಟೈಟ್ ಸೆಕ್ಯೂರಿಟಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ನಿವಾಸದ ಮುಂದೆ ಧಿಡೀರ್ ಪ್ರತಿಭಟನೆ ನಡೆಸಿದ್ದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಇರಲಿಲ್ಲವೆನ್ನಲಾಗಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿತ್ತು.

ಇಂದು ಕೂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಮಾಹಿತಿ ದೊರೆತಿರುವ ಕಾರಣ ಯಡಿಯೂರಪ್ಪನವರ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಕೆ.ಎಸ್.ಆರ್.ಪಿ. ತುಕಡಿ ಸ್ಥಳದಲ್ಲಿದ್ದು, ಒಂದು ವೇಳೆ ಪ್ರತಿಭಟನೆ ನಡೆಸಲು ಮುಂದಾದರೆ ಅಂತವರನ್ನು ಬಂಧಿಸಿ ಕರೆದೊಯ್ಯಲು ಬಸ್ ಒಂದನ್ನು ಸಿದ್ದವಾಗಿರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...