alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಒಂದಾದ ಯಡಿಯೂರಪ್ಪ-ಈಶ್ವರಪ್ಪ

download

ರಾಜ್ಯ ಬಿಜೆಪಿಯಲ್ಲಿದ್ದ ಮುನಿಸು ಶಮನವಾದಂತೆ ಕಾಣ್ತಾ ಇದೆ. ಹಾವು-ಮುಂಗುಸಿಯಂತಿದ್ದ ಯಡಿಯೂರಪ್ಪ ಹಾಗೂ ಈಶ್ವರಪ್ಪ ಮತ್ತೆ ಒಂದಾಗಿದ್ದಾರೆ. ಹೈಕಮಾಂಡ್ ಅಂಗಳದಲ್ಲಿ ನಡೆದ ಸಭೆ ಬಳಿಕ ಇಬ್ಬರು ಒಟ್ಟಿಗೆ ಬೆಂಗಳೂರಿಗೆ ಬಂದಿಳಿದಿದ್ದಾರೆ.

ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆದಿತ್ತು. ಸಂಧಾನ ಸಭೆ ಸಫಲವಾಗಿದ್ದು, ಇಂದು ರಾಜ್ಯ ನಾಯಕರು ಬೆಂಗಳೂರಿಗೆ ಬಂದಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಯಡಿಯೂರಪ್ಪ ಎಲ್ಲ ಸಮಸ್ಯೆ ಬಗೆಹರಿದಿದೆ. ಸಂಘಟಿತ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸುವುದೇ ಮುಖ್ಯ ಅಜೆಂಡಾ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ಉಸ್ತುವಾರಿ ಹೊಣೆಯನ್ನು ಈಶ್ವರಪ್ಪ ನೋಡಿಕೊಳ್ಳಲಿದ್ದಾರೆಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದು, ನಮ್ಮ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಎನ್ನುವ ಮೂಲಕ  ಮುನಿಸಿಗೆ ಅಂತ್ಯ ಹಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...